BlogLatestರಾಜ್ಯ-Karnataka

ನಾಳೆಯಿಂದ ಅ.20ರ ವರೆಗೆ ಶಾಲಾಗಳಿಗೆ ದಸರಾ ರಜೆ

ಬೆಂಗಳೂರು : ನಾಳೆಯಿಂದ ರಾಜ್ಯದ ಎಲ್ಲಾ ಶಾಲಾಗಳಿಗೆ ದಸರಾ ರಜೆ ಘೋಷಿಸಲಾಗಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಅಕ್ಟೋಬರ್‌ 3ರಿಂದ ಅಕ್ಟೋಬರ್‌ 20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಒಟ್ಟು 17 ದಿನ ವಿದ್ಯಾರ್ಥಿಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ.

ಇಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಲಾಗಿದ್ದು, ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್‌ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬರ್‌ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್‌ 10 ತನಕ ಶಾಲೆ ನಡೆಯಲಿದೆ.

Share with Friends
author avatar
News Desk