LatestTop Storiesರಾಜ್ಯ-Karnataka

ರಾಜ್ಯದಲ್ಲಿ ಆ.8ರ ವರೆಗೆ ಎಸ್‌ಐಆರ್ ಅವಧಿ ವಿಸ್ತರಣೆ

ಬೆಂಗಳೂರು, ಜು.15: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅವಧಿ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.ಸದ್ಯ ಕರ್ನಾಟಕದ ಜೊತೆ ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲೂ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಆಯೋಗ ಆದೇಶ ಹೊರಡಿಸಿದೆ.

ಇನ್ನು ಬಿಎಲ್‌ಒಗಳಿಗೆ ಎಸ್‌ಐಆರ್‌ ನಮೂನೆ ವಿಸ್ತರಣೆಗೆ ಈ ತಿಂಗಳ ಅಂತ್ಯದ ವರೆಗೆ ಸಮಯ ಇತ್ತು.ಆದರೆ ಇದನ್ನು ದೀಗ ಆಗಸ್ಟ್‌ 8 ರ ಅವಧಿ ವಿಸ್ತರಿಸಲಾಗಿದೆ.ಆಗಸ್ಟ್‌ 8ರ ವರೆಗೆ ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ ಸಂಗ್ರಹಕ್ಕೆ ಅವಕಾಶ ನೀಡಿ ಆಯೋಗ ಆದೇಶ ಹೊರಡಿಸಿದೆ.

ಇದೇ ವೇಳೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್,ಈಗಾಗಲೇ 5.27 ಕೋಟಿಗೂ ಹೆಚ್ಚು ಎನ್ಯೂಮರೇಷನ್ ಫಾರ್ಮ್‌ಗಳನ್ನ ವಿತರಿಸಲಾಗಿದ್ದು,13 ಜಿಲ್ಲೆಗಳಲ್ಲಿ ಶೇ.100ರಷ್ಟು ವಿತರಣೆ ಪೂರ್ಣಗೊಂಡಿದೆ.ಜೊತೆಗೆ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚುನಾವಣಾ ಆಯೋಗ ಮತ್ತಷ್ಟು ವೇಗ ನೀಡಿದ್ದು,ವಾರಾಂತ್ಯದಲ್ಲೂ ವಿಶೇಷ ಅಭಿಯಾನ ನಡೆಸುವುದಾಗಿ ಹೇಳಿದರು.

ರಾಜ್ಯಾದ್ಯಂತ ಮತದಾರರ ಗಣತಿ ನಮೂನೆ ವಿತರಣೆ ಭರದಿಂದ ಸಾಗುತ್ತಿದ್ದು, ಈವರೆಗೆ 5,27,15,809ದಷ್ಟು ಎನ್ಯೂಮರೇಷನ್ ಫಾರ್ಮ್‌ಗಳನ್ನ ವಿತರಿಸಲಾಗಿದೆ.1 ಕೋಟಿ 99 ಲಕ್ಷ 51 ಸಾವಿರ 635 ಫಾರ್ಮ್‌ಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಸುಮಾರು ಶೇ.40 ರಷ್ಟು ಡಿಜಿಟಲೀಕರಣ ನಡೆದಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ವ್ಯಾಪ್ತಿಯಲ್ಲಿ 1 ಕೋಟಿ 3 ಲಕ್ಷ 88 ಸಾವಿರ 363 ಮತದಾರರ ಪೈಕಿ 81 ಲಕ್ಷ 30 ಸಾವಿರ 826 ಮಂದಿಗೆ ಎನ್ಯೂಮರೇಷನ್ ಫಾರ್ಮ್ ವಿತರಿಸಲಾಗಿದೆ.ಯಾದಗಿರಿ, ರಾಯಚೂರು, ಕೊಪ್ಪಳ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಶೇ.100ರಷ್ಟು ಫಾರ್ಮ್ ವಿತರಣೆ ಪೂರ್ಣಗೊಂಡಿದೆ.ಜೊತೆಗೆ ಪ್ರತಿಯೊಂದು ಜಿಲ್ಲೆಗೂ ಜಂಟಿ ಮುಖ್ಯ ಚುನಾವಣಾಧಿಕಾರಿ ಕಳುಹಿಸುತ್ತೇವೆ.ಡಿಜಿಟಲೀಕರಣದ ವೇಗ ಹಾಗೂ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Share with Friends
author avatar
Digital Desk