Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ (Shivaramegowda) ಮನೆ ಮೇಲೆ ಮೊಟ್ಟೆ (Egg) ದಾಳಿಗೆ (Attack) ಯತ್ನ ನಡೆದಿದೆ.

ಪೆನ್ ಡ್ರೈವ್ ವಿಚಾರ ಮಾತನಾಡುವಾಗ ಮಾಜಿ ಸಂಸದರು ಜೆಡಿಎಸ್ (JDS) ವರಿಷ್ಠರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.

ಐದಾರು ಮಂದಿ ತಡರಾತ್ರಿ ಕಾರಿನಲ್ಲಿ ಬಂದು ಈ ದಾಳಿ ನಡೆಸಿದ್ದಾರೆ. ಬಳಿಕ ಪೊಲೀಸರನ್ನ ಕಂಡ ಕೂಡಲೇ ಮನೆ ಮುಂದೆ ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಈ ನಡುವೆ ಪೊಲೀಸರ ಕಣ್ತಪ್ಪಿಸಿ ಅದಾಗಲೇ ಐದಾರು ಮೊಟ್ಟೆ ಎಸೆದಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

https://youtu.be/RciZKfLO6VM?si=OQw7ftQ9a8IFSDQ8

ಸದ್ಯ ಮೊಟ್ಟೆ ಎಸೆಯಲು ಯತ್ನಿಸಿ ಪರಾರಿಯಾದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಮೊಟ್ಟೆ ಎಸೆಯಲು ಯತ್ನಿಸಿದವರಿಗೆ ಬಲೆ ಬೀಸಲಾಗಿದೆ.

ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್ ಆರ್ ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದಾರೆ.

https://youtu.be/Jd2hi_uzx-E?si=pOzjftdnvzK-nc7o
Share with Friends
author avatar
News Desk