Crime Newsಬೆಂಗಳೂರು-Bengaluru

ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ..!

ಬೆಂಗಳೂರು, ಜು.23: ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಜುನಾಥ ನಗರದಲ್ಲಿ ನಡೆದಿದೆ.
ಈಶ್ವರ್ ಆಚಾರಿ(73) ಗೌರಿ (66) ಮೃತ ದಂಪತಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಜುನಾಥನಗರದ ಮನೆಯಲ್ಲಿ ವಾಸವಿದ್ದ ಈಶ್ವರ್ ಪತ್ನಿ ಗೌರಿ ಸೊಂಟದ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.ಹೀಗಾಗಿ ಅವರ ಚಿಕಿತ್ಸಾ ವೆಚ್ಚವನ್ನು ಇಬ್ಬರು ಹೆಣ್ಣುಮಕ್ಕಳೇ ಭರಿಸುತ್ತಿದ್ದರು.ಆದರೆ ಚಿಕಿತ್ಸಾ ವೆಚ್ಚ ಭರಿಸಲು ಮಕ್ಕಳಿಗೆ ಕಷ್ಟವಾಗುತ್ತಿದೆ ಎಂದು ಮನನೊಂದ ದಂಪತಿ ರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದಾರೆನ್ನಲಾಗಿದೆ.

ಎಂದಿನಂತೆ ಮಗಳು ಕರೆ ಮಾಡಿದಾಗ ಇಬ್ಬರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಮನೆ ಬಳಿ ಬಂದು ನೋಡಿದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಸವೇಶ್ವರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ..

Share with Friends
author avatar
Digital Desk