LatestTop Storiesಜಿಲ್ಲಾ ಸುದ್ದಿಗಳು | District News

ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ಭವನಕ್ಕೆ ವಿದ್ಯುತ್ ಸಂಪರ್ಕ ಕಡಿತ

ದೇವನಹಳ್ಳಿ.ಸೆ.30- ಸುಮಾರು 9 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಲ್ಲಿನ ಅಂಬೇಡ್ಕರ್ ಭವನಕ್ಕೆ ವಿದ್ಯುತ್ ಬಿಲ್ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಂಬೇಡ್ಕರ್ ಭವನಕ್ಕೆ 2022ರವರೆಗೆ ಸುಮಾರು 14 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿದಿದೆ. ಹೀಗಾಗಿ ಬಾಕಿ ಮೊತ್ತವನ್ನು ಮನ್ನಾ ಮಾಡುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಲಾಗಿದೆ.

ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದರಿಂದ ಭವನದ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡ ನಿರ್ವಹಣೆಯಿಲ್ಲದೆ ಬಳಕೆಗೆ ಅಡಚಣೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೆ.ಎಚ್. ಮುನಿಯಪ್ಪ ಕ್ಷೇತ್ರದಲ್ಲೇ ಈ ಘಟನೆ ನಡೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಕಟ್ಟಡಕ್ಕೆ ಬಾಕಿ ಉಳಿದಿರುವ ವಿದ್ಯುತ್ ಬಿಲ್ ಪಾವತಿಸಿ, ಶೀಘ್ರ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share with Friends
author avatar
Digital Desk