LatestTop Storiesಬೆಳಗಾವಿ-Belagavi

ಕನಿಷ್ಠ ವೇತನಕ್ಕಾಗಿ ನೌಕರರ ಹೋರಾಟ – ಸರ್ಕಾರಕ್ಕೆ ಸೆಪ್ಟೆಂಬರ್ 8ರ ಗಡುವು

ಬೆಳಗಾವಿ: ಕನಿಷ್ಠ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಬೆಳಗಾವಿಯ ಒಳಗುತ್ತಿಗೆ ಆಧಾರಿತ ನೌಕರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ 8ರ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕಳೆದ ಹಲವು ವರ್ಷಗಳಿಂದ, ಸುಮಾರು 15ರಿಂದ 20 ವರ್ಷಗಳಿಂದ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಾ ಬಂದಿದ್ದೇವೆ.

ನಾಲ್ಕು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದರು.ನೂರು ಅಥವಾ ಎರಡು ನೂರು ಮಕ್ಕಳು ಇರಲಿ, ಕಡಿಮೆ ವೇತನದಲ್ಲೇ ಕೆಲಸ ಮಾಡುತ್ತಾ ಬಂದಿದ್ದೇವೆ. ಆದರೆ ಇಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಈ ವೇತನದಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ ಎಂದು ನೌಕರರು ತಮ್ಮ ಸಂಕಷ್ಟವನ್ನು ತೋಡಿಕೊಂಡರು.

ಕನಿಷ್ಠ ವೇತನಕ್ಕಾಗಿ ನೌಕರರ ಹೋರಾಟ ಸರ್ಕಾರಕ್ಕೆ ಸೆಪ್ಟೆಂಬರ್ 8ರ ಗಡುವು

ಅಡುಗೆ ಅನಿಲ, ತರಕಾರಿ, ಶಾಲಾ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳು ಹೆಚ್ಚಾಗಿವೆ. ಆದರೆ ವೇತನ ಮಾತ್ರ ಅದೇ ಇದೆ ಎಂದು ಅವರು ಆರೋಪಿಸಿದರು.ಹೀಗಾಗಿ ನಮಗೆ ಕನಿಷ್ಠ ವೇತನ ನೀಡಲೇಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.
ಸೆಪ್ಟೆಂಬರ್ 8ರೊಳಗೆ ಒಳಗುತ್ತಿಗೆ ಆಧಾರದ ಮೇಲಿರುವ ನೌಕರರ ಬೇಡಿಕೆಗಳನ್ನು ಈಡೇರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ನೌಕರರು ಎಚ್ಚರಿಕೆ ನೀಡಿದರು.
ಸರ್ಕಾರ ಕೂಡಲೇ ನಮ್ಮ ಬೇಡಿಕೆಗಳನ್ನು ಪರಿಗಣಿಸಿ ನ್ಯಾಯ ಒದಗಿಸಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ. ಆರೋಗ್ಯ, ಶಿಕ್ಷಣ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಾವಿರಾರು ನೌಕರರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಈಗಾಗಲೇ ಹಲವು ಬಾರಿ ಮನವಿ, ಪ್ರತಿಭಟನೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈ ಬಾರಿ ಅಂತಿಮ ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂದು ನೌಕರರ ಮುಖಂಡರು ಹೇಳಿದರು.
ಒಳಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ ವಿಚಾರ ಈಗಾಗಲೇ ಹಲವು ಬಾರಿ ಚರ್ಚೆಗೆ ಬಂದಿದೆ. ಆದರೆ ಇನ್ನೂ ಸ್ಪಷ್ಟ ನಿರ್ಧಾರ ಹೊರಬಂದಿಲ್ಲ. ಸೆಪ್ಟೆಂಬರ್ 8ರ ಗಡುವು ಮುಗಿದ ನಂತರ ನೌಕರರು ಯಾವ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Share with Friends
author avatar
Digital Desk