
BREAKING : ಬೇಟೆಗಾರರ ಎನ್‌ಕೌಂಟರ್ ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಕೊಲೆ ಕೇಸ್
ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರೆನ್ನಲಾದ ವ್ಯಕ್ತಿಗಳ ಮೇಲೆ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೃತ ಆಥೋಣಿಸಾಮಿ ಅವರ ಪತ್ನಿ ಲೂರ್ದಾಮೇರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಎಫ್‌ಐಆರ್‌ನಲ್ಲಿ ನಿರ್ದಿಷ್ಟ ಅರಣ್ಯಾಧಿಕಾರಿಗಳ ಹೆಸರುಗಳನ್ನು ನಮೂದಿಸದೇ, ‘ಹನೂರು ವಿಭಾಗದ ಅರಣ್ಯ ಅಧಿಕಾರಿಗಳು’ ಎಂದು ಆರೋಪಿಗಳಾಗಿ ದಾಖಲಿಸಲಾಗಿದೆ.
ಮೃತ ಆಥೋಣಿಸಾಮಿ ಅವರ ಸಾವಿನ ಹಿನ್ನೆಲೆಯಲ್ಲಿ ಬಿಎನ್‌ಎಸ್ ಸೆಕ್ಷನ್ 103(1) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಹಾಗೂ ಚಾಮರಾಜನಗರ ಎಸ್ಪಿ ಮುತ್ತುರಾಜು ಅವರ ಸಮ್ಮುಖದಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಐಜಿ ಬೋರಲಿಂಗಯ್ಯ ಹಾಗೂ ಎಸ್ಪಿ ಮುತ್ತುರಾಜು ಅವರು ಹನೂರು ಪೊಲೀಸ್ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದಾರೆ.
