Crime NewsLatestಬೆಂಗಳೂರು-Bengaluruರಾಜ್ಯ-Karnataka

ತಂದೆಯ ಕಾರು ಹರಿದು ಮಗು ದುರ್ಮರಣ

ಬೆಂಗಳೂರು: ಆಕಸ್ಮಿಕವಾಗಿ ತಂದೆಯಿಂದಲೇ (Father) ಕಾರು(Car) ಹರಿದುಯ ಮಗು (Baby) ಸಾವನ್ನಪ್ಪಿರುವ ಘಟನೆ ಹೆಚ್‌ಎಸ್‌ಆರ್ ಲೇಔಟ್‌ನ ಆಗರದಲ್ಲಿ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶೈಜಾ ಜನ್ನತ್ ಒಂದೂವರೆ ವರ್ಷದ ಮೃತ ಕಂದಮ್ಮ. ಸಂಬಂಧಿಗಳ ಮದುವೆಗೆ ಎಂದು ಚನ್ನಪಟ್ಟಣಕ್ಕೆ ಹೋಗಿ ಕುಟುಂಬ ವಾಪಸ್ಸ್ ಆಗಿತ್ತು. ಕಾರಿನಿಂದ ಇಳಿದು ಎಲ್ಲರೂ ಮನೆ ಒಳಗೆ ಹೋಗಿದ್ದರು. ಮಗುವಿನ ತಂದೆ ಕಾರಿನಿಂದ ಲಗೇಜ್ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ಮಗು ತಂದೆಯ ಹತ್ತಿರ ಓಡಿ ಬಂದಿದೆ. ಇದನ್ನೂ ಓದಿ: ಕುಟುಂಬದವರೇ ಮದುವೆ ಮಂಟಪಕ್ಕೆ ನುಗ್ಗಿ ವಧೂವನ್ನು ಎಳೆದೊಯ್ಯಲು ಯತ್ನ

https://youtu.be/CVHlLryW8k8?si=NY2H17OgRviqLcK3

ಕಾರಿನಲ್ಲಿದ್ದ ಲಗೇಜ್ ಮನೆಯೊಳಗೆ ಇಡುತ್ತಿದ್ದಾಗ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು. ಆದರೆ ಇದನ್ನು ತಂದೆ ಗಮನಿಸಿರಲಿಲ್ಲ. ಲಗೇಜ್ ತೆಗೆದು ಕಾರು ಚಾಲನೆ ಮಾಡಿದ ಸಂದರ್ಭ ಆಕಸ್ಮಿಕವಾಗಿ ಕಾರು ಮಗು ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 24 ಗಂಟೆಯೊಳಗೆ ತೈವಾನ್‌ನಲ್ಲಿ 80 ಕ್ಕೂ ಹೆಚ್ಚು ಬಾರಿ ಕಂಪಿಸಿದ ಭೂಮಿ

ಈ ಕುರಿತು ಹೆಚ್‌ಎಸ್‌ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರದ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ

https://youtu.be/8LPX6mzVP_s?si=_uJPQZAYW9gL-p33
Share with Friends
author avatar
News Desk