LatestTop Storiesಮೈಸೂರು-Mysuru

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್..?

ಮೈಸೂರು.ಸೆ.25- ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಮೈಸೂರು ೬ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಬಿಎನ್‌ಎಸ್‌ಎಸ್ ಸೆಕ್ಷನ್ ೪೮೨ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಬಂಧನದ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಪ್ರತಾಪ್ ಸಿಂಹ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಮೈಸೂರು ಕೋರ್ಟ್ ಆದೇಶ ಪ್ರಕಟಿಸುವ ನಿರೀಕ್ಷೆಯಿದೆ.

ಈ ನಡುವೆ, ಪ್ರತಾಪ್ ಸಿಂಹಗೆ ನಿನ್ನೆ ಕರ್ನಾಟಕ ಹೈಕೋರ್ಟ್ನಲ್ಲಿ ಯಾವುದೇ ಮಧ್ಯಂತರ ರಿಲೀಫ್ ದೊರೆತಿಲ್ಲ.ತನಿಖೆಗೆ ಅಡ್ಡಿಯಾಗುವ ರೀತಿಯಲ್ಲಿ ಪೊಲೀಸರಿಂದ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪರಿಗಣಿಸಲಿಲ್ಲ.

ಪ್ರಕರಣದ ತನಿಖೆಯನ್ನು ಎದುರಿಸಿ, ಕಾನೂನುಬದ್ಧವಾಗಿ ಜಾಮೀನು ಪಡೆಯುವಂತೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಇದೀಗ ಮೈಸೂರು ನ್ಯಾಯಾಲಯದ ಆದೇಶದತ್ತ ಗಮನ ನೆಟ್ಟಿದೆ.

Share with Friends
author avatar
Digital Desk