Entertainmentಸ್ಯಾಂಡಲ್​ವುಡ್-Sandalwood

ರಾಧಿಕಾ ನಾರಾಯಣ್-ಮಿತ್ರ ಅಭಿನಯದ ‘ಮಹಾನ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಸಂಪೂರ್ಣ ನ್ಯೂಸ್ ಡೆಸ್ಕ್ : ಕನ್ನಡದಲ್ಲಿ ವಿಭಿನ್ನ ಹಾಗೂ ಸದಭಿರುಚಿಯ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ಪಿ.ಸಿ. ಶೇಖರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ “ಮಹಾನ್” ಚಿತ್ರದ ಪ್ರಮುಖ ಪಾತ್ರಧಾರಿಗಳಾದ ರಾಧಿಕಾ ನಾರಾಯಣ್ ಹಾಗೂ ಮಿತ್ರ ಅವರ ಫಸ್ಟ್ ಲುಕ್ ಅನಾವರಣಗೊಂಡಿದೆ.

‘ರಂಗಿತರಂಗ’ ಖ್ಯಾತಿಯ ರಾಧಿಕಾ ನಾರಾಯಣ್ ಹಾಗೂ ಖ್ಯಾತ ನಟ ಮಿತ್ರ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದು, ಈಗ ಬಿಡುಗಡೆಯಾಗಿರುವ ಅವರ ಫಸ್ಟ್ ಲುಕ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಜನಪ್ರಿಯ ನಟ ವಿಜಯ ರಾಘವೇಂದ್ರ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಈ ಸಿನಿಮಾ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರವಾಗಿದೆ. ಈ ಕುರಿತು ನಿರ್ಮಾಪಕರು ಮಾತನಾಡಿ, “ಪ್ರೇಕ್ಷಕರಿಗೆ ಸದಭಿರುಚಿಯ ಹಾಗೂ ಗುಣಮಟ್ಟದ ಸಿನಿಮಾಗಳನ್ನು ನೀಡುವುದು ನಮ್ಮ ಸಂಸ್ಥೆಯ ಉದ್ದೇಶ. ಅದರ ಮೊದಲ ಹೆಜ್ಜೆಯಾಗಿ ಪಿ.ಸಿ. ಶೇಖರ್ ನಿರ್ದೇಶನದಲ್ಲಿ ‘ಮಹಾನ್’ ಚಿತ್ರ ನಿರ್ಮಾಣವಾಗುತ್ತಿದೆ” ಎಂದು ತಿಳಿಸಿದ್ದಾರೆ.

‘ಮಹಾನ್’ ಚಿತ್ರದ ಫಸ್ಟ್ ಲುಕ್ ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Share with Friends
author avatar
News Desk