Latestಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ಬಿಜೆಪಿ ಮುಖಂಡ, ಯಡಿಯೂರಪ್ಪ ಅಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧಾನ

ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಇಂದು ಮುಂಜಾನೆ ನಿಧನರಾಗಿದ್ದಾರೆ.

ಸಿದ್ದಲಿಂಗಸ್ವಾಮಿ ಅವರು ಕಳೆದ ಆರೇಳು ತಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆ ಅವರು ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

ಸಿದ್ದಲಿಂಗಸ್ವಾಮಿ ಅವರು ಕೆಜಿಪಿ ಅಭ್ಯರ್ಥಿಯಾಗಿ 2013ರಲ್ಲಿ ವರುಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಉರುಳಿತು ಗ್ಯಾರಂಟಿ ಸರ್ಕಾರದ ಮೊದಲ ವಿಕೆಟ್‌- ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!

https://youtu.be/IrlpjBl1yQk?si=JPVuCbE8GWn9Ddak

ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಇತ್ತೀಚಿಗಷ್ಟೇ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

Share with Friends
author avatar
News Desk