BlogLatestTop Storiesದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ, ಆತ್ಮಹತ್ಯೆ ಶಂಕೆ ಹಿನ್ನೆಲೆಯಲ್ಲಿ ನದಿಯಲ್ಲಿ ಹುಡುಕಾಟ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸಾಯುತ್ತೇನೆಂದು ಮನೆ ಬಿಟ್ಟು ಹೋದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಸದ್ಯ ನಾಪತ್ತೆ ಆಗಿದ್ದಾರೆ. ಆದರೆ ಅವರ ಬಿಎಂಡಬ್ಲೂ ಕಾರ್ ಮಂಗಳೂರಿನ ಕುಳೂರು ಸೇತುವೆ ಮೇಲೆ ಪತ್ತೆ ಆಗಿದೆ. ಸದ್ಯ ಸ್ಥಳಕ್ಕೆ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲಿಸಿದ್ದು, ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ನಗರದ ಕೂಳೂರು ಬ್ರಿಡ್ಜ್​​ ಮೇಲೆ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕೆಎ19 ಎಂಜಿ0004 ಸಂಖ್ಯೆಯ BMW X5 ಕಾರು ಪತ್ತೆ ಆಗಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಎಸ್​ಡಿಆರ್​ಎಫ್​, ಎನ್​ಡಿಆರ್​​ಎಫ್​ ಅಗ್ನಿಶಾಮಕ ಸಿಬ್ಬಂದಿಯಿಂದ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

Share with Friends
author avatar
News Desk