BlogLatestTop Storiesವಿದೇಶ-International

ಅಮೆರಿಕಾದಲ್ಲಿ ಭೀಕರ ಅಪಘಾತ : ನಾಲ್ವರು ಭಾರತೀಯರು ಸಜೀವ ದಹನ

ಟೆಕ್ಸಾಸ್‌ : ಐದು ವಾಹನಗಳು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ. ಮೃತರು ಕಾರ್‌ಪೂಲಿಂಗ್ ಆಯಪ್ ಮೂಲಕ ಸಂಪರ್ಕ ಹೊಂದಿದ್ದು ಅರ್ಕಾನ್ಸಾಸ್‌ನ ಬೆಂಟೊನ್‌ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಎಲ್ಲಾ ಪ್ರಯಾಣಿಕರು ಸುಟ್ಟುಹೋಗಿದ್ದಾರೆ.

ಮೃತರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ಓರಂಪತಿ ಮತ್ತು ಅವರ ಸ್ನೇಹಿತ ಶೇಕ್ ಡಲ್ಲಾಸ್‌ನಲ್ಲಿರುವ ತನ್ನ ಸೋದರಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು.

ಅಪಘಾತದ ತೀವ್ರತೆಗೆ ಕಾರು ಹೊತ್ತಿ ಉರಿದಿದ್ದು, ಪರಿಣಾಮ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತುಗಳನ್ನು ಖಚಿತಪಡಿಸಲು ಅಧಿಕಾರಿಗಳು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ.

ದರ್ಶಿನಿ ವಾಸುದೇವನ್ ಅವರ ತಂದೆ ಮೂರು ದಿನಗಳ ಹಿಂದೆ ಟ್ವಿಟರ್ ಪೋಸ್ಟ್‌ನಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಟ್ಯಾಗ್ ಮಾಡಿ ತಮ್ಮ ಮಗಳ ಪತ್ತೆಗೆ ಮನವಿ ಮಾಡಿದ್ದರು.

Share with Friends
author avatar
News Desk