EntertainmentLatestಸ್ಯಾಂಡಲ್​ವುಡ್-Sandalwood

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಿಲೀಸ್‌ ಆಗಲಿದೆ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡು

ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” (Krishnam Pranaya Sakhi) ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು (Srinivas Raju) ಅವರ ಈ ಸಿನಿಮ ನಿರ್ದೇಶನ ಮಾಡುತ್ತಿದ್ದಾರೆ. ಸ್ಯ ಈ ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ಗಳು ರಿಲೀಸ್‌ ಆಗಲಿದ್ದು, ಒಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ(Mysuru) ಬಿಡುಗಡೆಯಾಗಲಿದೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಅವರು ಒಟ್ಟು ಆರು ಹಾಡುಗಳು ಈ ಚಿತ್ರದಲ್ಲಿದೆ. ಇದರಲ್ಲಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡು ಹಾಡಿದ್ದಾರೆ. ಈ ಚಿತ್ರದ ಮೊದಲ ಹಾಡು ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಒಂದು ಕೌಟುಂಬಿಕ ಕಥಾಹಂದರ ಹೊಂದಿದೆ. ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ ಇದ್ದಾಗಿದ್ದು, ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

https://youtu.be/EX8Otkuxgrk?si=BPsw8b03LGdaZwLW

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಅಭಿಮಾನಿಗಳನ್ನು ಮನರಂಜಿಸಲಿದ್ದಿಯಾ ಎಂದು ಕಾದು ನೋಡಬೇಕಿದೆ.

Share with Friends
author avatar
News Desk