LatestTop Storiesಜಿಲ್ಲಾ ಸುದ್ದಿಗಳು | District News

6 ತಿಂಗಳಿಂದ ಗ್ಯಾಸ್ ಸಮಸ್ಯೆ..! ಕೊಡೇಕಲ್ ಜನರ ಆಕ್ರೋಶ..!

ಹುಣಸಗಿ ತಾಲೂಕಿನ ಕೊಡೇಕಲ್ ಪಟ್ಟಣದಲ್ಲಿ ಸಮರಪಕ ಅಡುಗೆ ಗ್ಯಾಸ್ ಪೂರೈಕೆಗೆ ಆಗ್ರಹಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಳೆದ ಆರೇಳು ತಿಂಗಳಿಂದ ಕೊಡೇಕಲ್ ವಲಯಕ್ಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಕೊಡೇಕಲ್ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಅಡುಗೆ ಅನಿಲಕ್ಕಾಗಿ ಜನರು ದೂರದ ಜಾಲಹಳ್ಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಮಯ ಮತ್ತು ಹಣ ವ್ಯರ್ಥವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಡುಗೆ ಅನಿಲ ಪೂರೈಕೆಯ ಜೊತೆಗೆ ಕೊಡೇಕಲ್‌ಗೆ ಮಂಜೂರಾಗಿರುವ ಪಶು ಆಸ್ಪತ್ರೆಗೆ ಜಾಗ ಹದ್ದುಬಸ್ತ್ ಮಾಡಬೇಕು ಹಾಗೂ ಬಿಸಿಎಂ ಹಾಸ್ಟೆಲ್‌ಗೆ ಜಾಗ ಮಂಜೂರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ಕೊಡೇಕಲ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಮಾಡಬೇಕು. ಜನರ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು.”

ಪ್ರತಿಭಟನೆಯಿಂದ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ತಾಲೂಕು ಆಹಾರ ನಿರೀಕ್ಷಕ ಸಿ.ಎಸ್. ರಾಜು ಹಾಗೂ ಉಪತಹಸೀಲ್ದಾರ್ ಕಲ್ಲಪ್ಪ ಜಂಜಿನಗಡ್ಡಿ ಭೇಟಿ ನೀಡಿದರು.

ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದ ಕರವೇ ಕಾರ್ಯಕರ್ತರು, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

Share with Friends
author avatar
Digital Desk