BlogLatestರಾಜ್ಯ-Karnataka

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆಗಿದೆ. ಭರತ್​ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಜಾಮೀನು ಪಡೆದ ಆರೋಪಿಗಳು.

ಈ ಎಲ್ಲ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್​, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಈ ಪ್ರಕರಣದ ಒಟ್ಟು 18 ಆರೋಪಿಗಳಲ್ಲಿ ಎಂಟು ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಹಿಂದೆ ನಾಲ್ವರು ಆರೋಪಿಗಳಿಗೆ ಷರತ್ತು ವಿಧಿಸಿ ಜಾಮೀನು ನೀಡಲಾಗಿತ್ತು.

ಆರೋಪಿಗಳ ವಿರುದ್ಧ 2017 ರಲ್ಲಿ ರಾಜರಾಜೇಶ್ವರಿ ನಗರ ಪೊಲೀಸರು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಮತ್ತು ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿಗಳು 2018 ರಿಂದ ನ್ಯಾಯಾಂಗ ಬಂಧನದಲ್ಲಿದ್ದರು.

Share with Friends
author avatar
News Desk