LatestTop Storiesಚುನಾವಣೆ-Electionಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnatakaರಾಷ್ಟ್ರೀಯ-National

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಮತ್ತೆ ವಿಘ್ನ?

ಬೆಂಗಳೂರು,ಜು.9: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮತ್ತೆ ವಿಘ್ನ ಎದುರಾಗುವುದು ನಿಶ್ಚಿತವಾಗಿದೆ.
ಸದ್ಯ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಆಗಸ್ಟ್ 30ರೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಲಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಕಾಲಾವಕಾಶ ಕೋರಿ ಅಫಿಡವಿಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂಬ ಮಾಹಿತಿ ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ

ಸರ್ಕಾರದ ಪರ ವಾದಿಸುತ್ತಿದ್ದ ವಕೀಲರನ್ನು ಬದಲಾಯಿಸಿ ಬೇರೊಬ್ಬ ಪ್ರಖ್ಯಾತ ವಕೀಲರ ಮೂಲಕ ಇದೇ 13 ರಂದು ಸುಪ್ರೀಂ ಕೋರ್ಟ್ ಗೆ ರಾಜ್ಯ ಚುನಾವಣಾ ಆಯೋಗದ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೆ, ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿಯ ಬಹುಪಾಲು ಮಂದಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರತರಾಗಿರುವುದರಿಂದ ಚುನಾವಣಾ ಸಿದ್ಧತೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸರ್ಕಾರದ ಪ್ರಮುಖ ವಾದವಾಗಿದೆ.

ಜಿಬಿಎ ವ್ಯಾಪ್ತಿಯಲ್ಲಿ ಬೃಹತ್ ಪ್ರಮಾಣದಲ್ಲಿ ಚುನಾವಣೆ ನಡೆಸಲು ಬೇಕಾದಷ್ಟು ಸಿಬ್ಬಂದಿ ಲಭ್ಯವಿಲ್ಲ. ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಚುನಾವಣಾ ಪೂರ್ವ ಸಿದ್ಧತೆ ಆರಂಭಿಸಲು ಸರ್ಕಾರ ನಿರ್ಧರಿಸಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಮತ್ತೆ ಅರ್ಜಿ ಸಲ್ಲಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಸುಪ್ರಿಂ ಕೋರ್ಟ್‌ ಪೀಠ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಅಪಿಡೆವಿಟ್ ಸಲ್ಲಿಕೆಗೆ ಸರ್ಕಾರ ಮುಂದಾಗಿದೆ.

ಒಂದು ವೇಳೆ ಸುಪ್ರೀಂ ಕೋರ್ಟ್ ಸರ್ಕಾರದ ಅರ್ಜಿ ವಜಾಗೊಳಿಸಿದರೆ ಜುಲೈ 15ರ ನಂತರ ಜಿಬಿಎ ಚುನಾವಣೆ ಷೋಷಣೆ ಅಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಮೇ ನಲ್ಲಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಸುಪ್ರಿಂ ಕೋರ್ಟ್‌ ಪೀಠ, ಜಿಬಿಎ ಹಾಗೂ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು ಆಗಸ್ಟ್ 30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ ಪ್ರಸ್ತುತ ಆಡಳಿತಾತ್ಮಕ ಹಾಗೂ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ಆ ಗಡುವು ಪಾಲಿಸುವುದು ಸವಾಲಾಗಿದೆ ಎಂದು ಸರ್ಕಾರ ವಾದ ಮಂಡಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ಅರ್ಜಿಗೆ ಸುಪ್ರೀಂ ಕೋರ್ಟ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Share with Friends
author avatar
Digital Desk