ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ
ಬೆಂಗಳೂರು: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ಇಂದು ಹಣ ಜಮೆಯಾಗುವ ಸಾಧ್ಯತೆಯಿದೆ. ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.
ವರಮಹಾಲಕ್ಷ್ಮಿ ಹಬ್ಬದ ಬೆನ್ನಲ್ಲೇ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡುವ ಸಾಧ್ಯತೆಯಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ತಿಂಗಳಿಗೆ 2000 ಹಣ ನೀಡುವ ಗೃಹಲಕ್ಷ್ಮೀ ಯೋಜನೆ ರಾಜ್ಯದ ಮಹಿಳೆಯರಿಗೆ ಖುಷಿ ತಂದಿತ್ತು.ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕದೇ ಇರೋದು ಮಹಿಳೆಯರಿಗೆ ಬೇಸರ ತರಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ.
26.65 ಲಕ್ಷ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜೂನ್ ತಿಂಗಳ ಹಣ ಪಾವತಿ ಆಗಲಿದ್ದು, ಕಳೆದ ಎರಡು ತಿಂಗಳಿಂದ ಬಿಡುಗಡೆಯಾಗದ ಗೃಹಲಕ್ಷ್ಮಿ ಹಣ ಹಬ್ಬದ ಸಮಯದಲ್ಲೇ ನೀಡುತ್ತಿರುವುದು ಮಹಿಳೆಯರಿಗೆ ಸಂತಸ ತರಿಸಿದೆ.
