ಚುರುಕುಗೊಂಡ ಮುಂಗಾರು- ರಾಜ್ಯದ ಹಲವೆಡೆ ರೆಡ್, ಆರೆಂಜ್ ಅಲರ್ಟ್ ಘೋಷಣೆ..!
ಬೆಂಗಳೂರು: ಭಾನುವಾರ (Sunday) ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಇಂದು ಸಹ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮೂನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿ ಇಂದು ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಸಹ ಉತ್ತಮ ಮಳೆಯಾಗಲಿದೆ. ಉತ್ತರ ಒಳನಾಡು ಹಾಗು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ – ಮಳೆ ರಾಯನ ಆರ್ಭಟಕ್ಕೆ ಜನ ತತ್ತರ….!
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಹುಲ್, ಖರ್ಗೆ ಭೇಟಿ ಮಾಡಿ ಬೆಂಗಳೂರಿಗೆ ಡಿಕೆಶಿ ವಾಪಸ್
