
ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 22: ರಾಜ್ಯದ ಕೆಲ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ ಮತ್ತೊಂದೆಡೆ, ಮುಂಗಾರು ಮಳೆಯ ಕೊರತೆಯಿಂದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಿದ್ದು, ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಸಂಕಷ್ಟದ ಭೀತಿ ಎದುರಾಗಿದೆ.
13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ : ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಸೋಮವಾರದಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಒಂದೆಡೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದರೂ, ಜಲಾಶಯಗಳನ್ನು ತುಂಬುವಷ್ಟು ಮಳೆ ಇನ್ನೂ ಸುರಿದಿಲ್ಲ. ಮುಂದಿನ ದಿನಗಳಲ್ಲಿ ವರುಣನ ಕೃಪೆ ದೊರೆಯದಿದ್ದರೆ ಕೃಷಿ ಚಟುವಟಿಕೆಗಳ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ರಾಜ್ಯದ ಜನರನ್ನು ಕಾಡುವ ಸಾಧ್ಯತೆ ಇದೆ. ರಾಜ್ಯದ ಪ್ರಮುಖ ಜಲಾಶಯಗಳತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ.
