LatestWeatherಬೆಂಗಳೂರು-Bengaluruರಾಜ್ಯ-Karnataka

ರಾಜ್ಯದಲ್ಲಿ ಇಂದಿನಿಂದ ಜೂನ್‌ 12 ರ ವರೆಗೆ ಭಾರೀ ಮಳೆಯ ಎಚ್ಚರಿಕೆ

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಅಲರ್ಟ್‍ಗಳನ್ನು ಘೋಷಣೆ ಮಾಡಲಾಗಿದೆ. ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!

https://youtu.be/YU0fyyFEI8I?si=Vi8vsUKT_39iWa_m

ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಮುಂದಿನ 3 ಗಂಟೆಗಳ ಕಾಲ 30-40 ಕಿಮೀ ವೇಗದಲ್ಲಿ ಗಾಳಿ, ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ

https://youtu.be/N__BjhNj9eo?si=-E3fOK3feJ4UA3RS

ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಜರ್ಮನಿಯಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್‍- ಪ್ರೇಯಸಿಗೆ SIT ನೋಟಿಸ್

https://youtu.be/YU0fyyFEI8I?si=Kw-BVD5lr1i9ZsZI
Share with Friends
author avatar
News Desk