Latestಬೆಂಗಳೂರು-Bengaluruರಾಜ್ಯ-Karnatakaವಾಣಿಜ್ಯ

ವಾಹನ ಸವಾರರಿಗೆ ಭಾರೀ ಶಾಕ್‌; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ (Petrol) ಹಾಗೂ ಡೀಸೆಲ್‌ (Diesel) ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.

ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಮಾಜಿ ಸಿಎಂ ಬೊಮ್ಮಾಯಿ ರಾಜೀನಾಮೆ

https://youtu.be/im3A26aei2Q?si=ZXa1gEzZBipIhks9

ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ‌ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ).

https://youtu.be/XZ2FfvY4KTI?si=9PgVMR_HxhANC8EC

ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್‌ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್‌ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್‌ ದರ 85.93 ರೂಪಾಯಿ ಇದೆ. ಅದು 89.43 ರೂ. ಏರಿಕೆಯಾಗಲಿದೆ. ಇದನ್ನೂ ಓದಿ: ​​​ಆಂಧ್ರದ ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಗೆ ಸ್ಥಾನ

Share with Friends
author avatar
News Desk