ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನ್ಯಾ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ. ಹಾಗೆಯೇ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ವಜಾ ಆಗಿದೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ.
ಅತ್ಯಾಚಾರ ಪ್ರಕರಣ ಸೇರಿದಂತೆ ಪ್ರಜ್ವಲ್ ವಿರುದ್ದ ಒಟ್ಟು ಮೂರು ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಮಹಿಳೆ ಮೇಳೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
