Blogepaperಬೆಂಗಳೂರು-Bengaluru

ಮಳೆ ಆರ್ಭಟ : ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ರಜೆ ಘೋಷಿಸಿದ್ದು, ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

ಎಲ್ಲಾ ಶಾಲೆಗಳಿಗೆ ದಸರಾ ರಜೆ ನೀಡಲಾಗಿದ್ದು, ದಸರಾ ರಜೆ ಕಡಿತ ಮಾಡಿ ತರಗತಿ ನಡೆಸುತ್ತಿರುವ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಬೇಕು ಎಂದು ಖಾಸಗಿ ಶಾಲೆಗಳ ಸಂಘಟನೆಗಳು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿವೆ.

ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.

Share with Friends
author avatar
News Desk