LatestTop Storiesತುಮಕೂರು-Tumakuru

ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ..

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹತ್ತಿರದ ಗೋಡೆಕೆರೆ ಗೇಟ್ ಬಳಿ ಎರಡು ಕಾರುಗಳು ಪರಸ್ಪರ ಎದುರುಗೆಟಿಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ!

ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ತೆರಳುತ್ತಿದ್ದ ಮತ್ತೊಂದು ಕಾರಿಗೆ ಪರಸ್ಪರ ಟಿಕ್ಕಿ ಹೊಡೆದ ಪರಿಣಾಮ ಬೀಕರ ಅಪಘಾತ ಸಂಭವಿಸಿದೆ.

7.45ರ ವೇಳೆಗೆ ಅಪಘಾತ ಸಂಭವಿಸಿದೆ ಎರಡು ವಾಹನಗಳಿಂದ ಪೆಟ್ರೋಲ್ ಕೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ,ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಗೇಟ್ ಬಳಿಯ ಏತ ನೀರಾವರಿ ಬ್ರಿಡ್ಜ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತುರುವೇಕೆರೆ ತಾಲ್ಲೂಕಿನ ಕುಟುಂಬವೊಂದು ಪ್ರಯಾಣಿಸುತ್ತಿದ್ದ ವೋಕ್ಸ್‌ವ್ಯಾಗನ್ ಕಾರು ಅಪಘಾತಕ್ಕೀಡಾಗಿದೆ.ಕಾರಿನಲ್ಲಿದ್ದ ಚಾಲಕ, ಮಹಿಳೆ ಹಾಗೂ ಚಿಕ್ಕ ಮಗು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗರ್ಭಿಣಿ ಮಹಿಳೆ ಮತ್ತು ಮತ್ತೊಂದು ಮಗುವನ್ನು ತುರ್ತು ಚಿಕಿತ್ಸೆಗೆ ತುಮಕೂರಿಗೆ ರವಾನಿಸಲಾಗಿದೆ.ಚಿಕ್ಕನಾಯಕನಹಳ್ಳಿ ತಾಲೂಕಿನ ವಿವೇಕ ಅಲಿಯಾಸ್ ಚಿನ್ನಿ ಮೃತಪಟ್ಟಿರುವುದು ಖಚಿತವಾಗಿದೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪಘಾತ ಸಂಭವಿಸಿದ ಸ್ಥಳದಲ್ಲಿ ಯಾವುದೇ ವಿದ್ಯುತ್ ದೀಪಗಳ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ,ರಾತ್ರಿ ವೇಳೆ ಕತ್ತಲಿನ ಪರಿಸ್ಥಿತಿ ರಕ್ಷಣಾ ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿತ್ತು.ಘಟನೆ ನಡೆದ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಮುಂದಿನ ದಿನಕ್ಕೆ ಕೈಗೊಂಡಿದ್ದಾರೆ.

Share with Friends
author avatar
Digital Desk