
ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು
ಬೆಂಗಳೂರು.ಆ.17: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ-ಕೆ.ಆರ್. ಪುರಂ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಹೆಬ್ಬಾಳದಿಂದ ಕೆ.ಆರ್. ಪುರಂ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ಸವಾರನಿಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಬೊಲೆನೊ ಕಾರು ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಬ್ಯಾರಿಕೇಡ್ ಪಕ್ಕಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಡಿಕ್ಕಿಯ ಬಳಿಕ ಬೊಲೆನೊ ಕಾರು ಪಲ್ಟಿಯಾಗಿದ್ದು,ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು,ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
