BlogLatestTop Storiesರಾಷ್ಟ್ರೀಯ-National

ಪೆಟ್ರೋಲ್ -ಡಿಸೇಲ್‌ನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಪ್ರಯತ್ನಿಸುತ್ತಿದ್ದೇವೆ : ಹರ್ದೀಪ್‌ ಸಿಂಗ್‌ ಪುರಿ

ನವದೆಹಲಿ : ಪೆಟ್ರೋಲ್‌‍, ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಒಮತ ಮೂಡಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿ ಕರೆ ನೀಡಿದ್ದಾರೆ.

ಪುಣೆ ಇಂಟರ್‌ನ್ಯಾಶನಲ್‌ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದ ಅವರು, ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರಲು ನಾನು ಸಲಹೆಯನ್ನು ಕೇಳಿದ್ದೇನೆ ಎಂದಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ ) ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಮ್ಮತ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು.

ಈಗ ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ಅನ್ನು ತರಬೇಕು ಎಂದು ನಾನು ಬಹಳ ಸಮಯದಿಂದ ಪ್ರತಿಪಾದಿಸುತ್ತಾ ಬಂದಿದ್ದೇನೆ. ಈಗ ನನ್ನ ಹಿರಿಯ ಸಹೋದ್ಯೋಗಿ, ಹಣಕಾಸು ಸಚಿವರು ಕೂಡ ಹಲವಾರು ಸಂದರ್ಭಗಳಲ್ಲಿ ಇಂಧನವನ್ನು ಜಿಎಸ್‌ಟಿ ಅಡಿಯಲ್ಲಿ ತರುವ ಬಗ್ಗೆ ಮಾತನಾಡಿದ್ದಾರೆ ಎಂದು ನನಗೆ ಖಚಿತವಾಗಿದೆ ಎಂದು ಹೇಳಿದ್ದಾರೆ.

Share with Friends
author avatar
News Desk