
ಪತ್ನಿ ಕತ್ತು ಹಿಸುಕಿ ಕೊಂದ ಪತಿ..!
ಕಲಬುರಗಿ.ಸೆ.29- ನಗರದ ಹೊರವಲಯದ ಶರಣಶಿರಸಗಿ ಬಳಿ ಪತಿಯೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ರೇಣುಕಾ ಶಿಂಧೆ (೩೮) ಎಂದು ಗುರುತಿಸಲಾಗಿದೆ.ಆಕೆಯ ಪತಿ ಸಂಜಯ್ ಕುಮಾರ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಪತ್ನಿಯ ಮೇಲೆ ಅಕ್ರಮ ಸಂಬಂಧದ ಅನುಮಾನ ಹೊಂದಿದ್ದ ಸಂಜಯ್ ಕುಮಾರ್, ಇದೇ ವಿಚಾರವಾಗಿ ಮನೆಯಲ್ಲಿ ಪದೇಪದೇ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ಸಂಜೆ ದಂಪತಿ ನಡುವೆ ಜಗಳ ನಡೆದಿದ್ದು, ಬಳಿಕ ಸಂಜಯ್ ಕುಮಾರ್ ರೇಣುಕಾ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
