
ಕುಣಿಗಲ್ ತಾಲೂಕಿನ ಜಾಣಗೆರೆ ಗ್ರಾಮದಲ್ಲಿ ಅಕ್ರಮ ಪೈಪ್‌ಲೈನ್ ತೆರವು
ತುಮಕೂರು,ಕುಣಿಗಲ್ ಸೆ18 : ಮಡಿಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಣಗೆರೆ ಗ್ರಾಮದಲ್ಲಿ ಕೆಲವು ಮನೆಗಳು ಗ್ರಾಮ ಪಂಚಾಯಿತಿಗೆ ಯಾವುದೇ ಮಾಹಿತಿ ನೀಡದೆ ಅಕ್ರಮವಾಗಿ ನೀರಿನ ಪೈಪ್‌ಲೈನ್‌ಗಳನ್ನು ಅಳವಡಿಸಿಕೊಡಿದ್ದರು ಎನ್ನಲಾಗಿದೆ,
ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು,ಕುಣಿಗಲ್ ಕಾರ್ಯನಿರ್ವಾಹಕ ಅಧಿಕಾರಿಗಳು ಅಧ್ಯಕ್ಷತೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ
ವಿಷಯ ತಿಳಿದು ಜಾಣಗೆರೆ ಗ್ರಾಮಕ್ಕೆ ಭೇಟಿ ನೀಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಯಾವುದೇ ಗ್ರಾಮ ಪಂಚಾಯತಿ ಅನುಮತಿ ಪಡೆಯದ ಗ್ರಾಮಸ್ಥರುಅಕ್ರಮ ನೀರಿನ ಪೈಪ್‌ಲೈನ್‌ಗಳನ್ನು ಅಳವಡಿಸಿಕೊಂಡಿದ್ದರು ಎನ್ನಲಾಗಿದೆ
ಈ ಬಗ್ಗೆ ತೆರಗೊಳಿಸುವಂತೆ ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಇಂದು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯ ಅನುಮತಿ ಇಲ್ಲದೆ ಈ ರೀತಿಯ ಪೈಪ್‌ಲೈನ್‌ಗಳನ್ನು ಅಳವಡಿಸಿಕೊಳ್ಳದಂತೆ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿದ್ದಾರೆ,
ಈಗಾಗಲೇ ತಾಲೂಕಿನಾದ್ಯಂತ ಹಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ನೀರಿನ ಪೂರೈಕೆಗೆ ಅಡ್ಡಿಯಾಗುವ ರೀತಿಯಲ್ಲಿ ಅಕ್ರಮವಾಗಿ ಪೈಪ್‌ಲೈನ್‌ಗಳನ್ನು ಅಳವಡಿಸಿಕೊಂಡಿದ್ದರು
ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕಾನೂನು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್ ಎಚ್ಚರಿಕೆ ನೀಡಿದರು.
ಗ್ರಾಮಸ್ಥರಿಗೆ ಸಮರ್ಪಕ ಹಾಗೂ ಸಮಾನ ರೀತಿಯಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು ಗ್ರಾಮ ಪಂಚಾಯಿತಿಯೊಂದಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
