
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿದ್ದ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆ ಸಲ್ಲಿಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಈ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಯಶವಂತರಾಯಗೌಡ ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸುವ ಪ್ರಯತ್ನ ನಡೆಸಿದ ಬಳಿಕ ಶಾಸಕರು ತಮ್ಮ ನಿರ್ಧಾರವನ್ನು ಬದಲಿಸಿಕೊಂಡಿದ್ದಾರೆ.
ಇದೀಗ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಯನ್ನು ವಾಪಸ್ ಪಡೆಯುತ್ತಿರುವುದಾಗಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗೆ ಅಧಿಕೃತ ಪತ್ರ ಬರೆದಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡಿದ್ದ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನವನ್ನು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮುಂದುವರಿಸಿದ್ದು, ಅದರ ಭಾಗವಾಗಿಯೇ ಈ ಬೆಳವಣಿಗೆ ನಡೆದಿದೆ. ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಹಿಂಪಡೆದಿರುವುದು ಕಾಂಗ್ರೆಸ್‌ಗೆ ಸದ್ಯದ ಮಟ್ಟಿಗೆ ನೆಮ್ಮದಿಯ ಬೆಳವಣಿಗೆಯಾಗಿದೆ.
