LatestWeatherಬೆಂಗಳೂರು-Bengaluruರಾಜ್ಯ-Karnataka

ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು: ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸದ್ಯ ಸಿಲಿಕಾನ್ ಸಿಟಿಯಲ್ಲಿ ಈಗ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರಿದಿದೆ. ಜನ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗುತ್ತಿದ್ದಾರೆ. ಮಳೆ ಬಂದರೆ ಸಾಕು ದೇವರೆ ಎನುವ ಪರಿಸ್ಥಿತಿ ಎದುತರಾಗಿದೆ.

https://youtu.be/6pZh0UjUGDM?si=uKw2PRA2N1md6DZ6

ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

https://youtu.be/M2KHexb54ZM?si=IEZ-JTeG5mn9udEJ

ಬೆಂಗಳೂರಿನಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Share with Friends
author avatar
News Desk