Crime NewsLatestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnatakaಹಾಸನ-Hassan

ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್

ಇದಕ್ಕೆಲ್ಲಾ ಹೆದರಿ ಓಡಿ ಹೋಗಲ್ಲ, ಇಂತಹ ಹಲವು ತನಿಖೆ ನಾವು ಎದುರಿಸಿದ್ದೇವೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಅವರು ತಳ್ಳಿಹಾಕಿದ್ದಾರೆ. ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ನಾಲ್ಕೈದು ವರ್ಷದ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ ಎಂದಿದ್ದಾರೆ. ಇದೆಲ್ಲಾ ಷಡ್ಯಂತ್ರ, ಇದಕ್ಕೆಲ್ಲಾ ಹೆದರಿ ಓಡಿ ಹೋಗಲ್ಲ. ಕಾನೂನು ಹೋರಾಟ ಮಾಡ್ತಿನಿ. ನನ್ನ ವಿರುದ್ಧ ನೀಡಿದ ದೂರಿನ ಬಗ್ಗೆ, ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಸರ್ಕಾರ ಎಸ್‌ಐಟಿಗೆ ವಹಿಸಿದೆಯಲ್ಲಾ, ಎಸ್‌ಐಟಿ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂದು ಹೋಗುತ್ತಿರುವ ರಾಜ್ಯದ ಜನರು

https://youtu.be/hUI_GuBNXgY?si=kx3SXitkOdj2AOCR

ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಅವರು ತಳ್ಳಿಹಾಕಿದ್ದಾರೆ. ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬೇಸಿಗೆ ಬಿಸಿಲಿಗೆ ಬೆಂಗಳೂರಿಗರಿಗೆ ಬೆಲೆ ಏರಿಕೆ ಶಾಕ್‌- ಹೆಚ್ಚಿದ ತರಕಾರಿ ಬೆಲೆ

https://youtu.be/tEV71sOEnV8?si=rrGLZspNbCrEgvVC

ದೇವೇಗೌಡರ ಫ್ಯಾಮಿಲಿ ಮೇಲೆ ಅಪವಾದ ಇದೇನು ಹೊಸದಲ್ಲ
ಇದೆಲ್ಲಾ ರಾಜಕೀಯ. ಸರ್ಕಾರ ಅವರದ್ದಿದೆ, ಏನು ಬೇಕಾದರೂ ಮಾಡಲಿ. ತನಿಖೆ ನಡೆಸಿ ಕಾನೂನಿನ ರೀತಿ ಏನಿದೆ ಅದಾಗಲಿ. ದೆವೇಗೌಡರ ಕುಟುಂಬದ ಮೇಲೆ ಆರೋಪ ಇವೇನೂ ಹೊಸದಲ್ಲ. ಮೊದಲಿಂದಲೂ ಇಂಥವನ್ನು ಎದುರಿಸಿದ್ದೇವೆ. ದೇವೇಗೌಡರ ಕುಟುಂಬದ ಮೇಲೆ ಲೋಕಾಯುಕ್ತ, ಸಿಐಡಿ ತನಿಖೆ ಇವೆಲ್ಲವನ್ನೂ ಎದುರಿಸಿದ್ದೇವೆ ಎಂದು ಹೊಳೆನರಸೀಪುರ ಶಾಸಕರಾದ ಅವರು ತಿಳಿಸಿದ್ದಾರೆ.ಇದನ್ನೂ ಓದಿ: ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

https://youtu.be/BNwwXuWwJxU?si=iUgCH8F8XtBbLnmP

ಕಳೆದ ವಾರ ಚುನಾವಣೆಗೆ ಮುನ್ನ ಪ್ರಜ್ವಲ್ ರೇವಣ್ಣರ ಲೈಂಗಿಕ ದೌರ್ಜನ್ಯದ ಹಲವು ವಿಡಿಯೋಗಳಿದ್ದ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದಿತ್ತು. ನೂರಾರು ಮಹಿಳೆಯರ ಜೊತೆ ಪ್ರಜ್ವಲ್ ರಾಸಲೀಲೆ ನಡೆಸಿದ ವಿಡಿಯೋಗಳು ಇವು. ಕೆಲಸದ ಆಮಿಷ ಇತ್ಯಾದಿ ವಿಚಾರಗಳಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಪ್ರಜ್ವಲ್ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

.

Share with Friends
author avatar
News Desk