LatestTop Storiesರಾಜಕೀಯ | Politics

ನೆಲಮಂಗಲದಲ್ಲಿ ಜೆಡಿಎಸ್ ಸ್ವಾಭಿಮಾನ ಯಾತ್ರೆ

ನೆಲಮಂಗಲ.ಅ.9- ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ನಿಂದ ಹಮ್ಮಿಕೊಂಡ ರೈತ ಸ್ವಾಭಿಮಾನ ಯಾತ್ರೆ ನೆಲಮಂಗಲದಲ್ಲಿ ನಡೆಯಿತು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನೂರಾರು ರೈತರು ಹಾಗೂ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪಾದಯಾತ್ರೆ ತಾಲ್ಲೂಕು ಕಚೇರಿವರೆಗೆ ಸಾಗಿತು. ಯಾತ್ರೆಯುದ್ದಕ್ಕೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಎತ್ತಿನ ಗಾಡಿಗಳ ಮೂಲಕ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ್ದು, ಯಾತ್ರೆ ಸಾರ್ವಜನಿಕರ ಗಮನ ಸೆಳೆಯಿತು. ರೈತರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Share with Friends
author avatar
Digital Desk