BlogEntertainmentLatestಸ್ಯಾಂಡಲ್​ವುಡ್-Sandalwood

ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

‘ಕನ್ನಡತಿ’ ಧಾರವಾಹಿ ಮೂಲಕ ಖ್ಯಾತಿ ಘಳಿಸಿರುವ ನಟ ಕಿರಣ್ ರಾಜ್ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ವೇಳೆ ಕಿರಣ್ ರಾಜ್ ಜೊತೆಗಿದ್ದ ರಾನಿ ಸಿನಿಮಾದ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಅದೃಷ್ಟವಶಾತ್ ಪಾರಾಗಿದ್ದಾರೆ. ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ದುರ್ಘಟನೆ ನಡೆದಿದೆ.

ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಿರಣ್ ರಾಜ್ ಸದ್ಯ ಕಿರುತೆರೆಯಿಂದ ದೂರ ಇದ್ದು ‘ರಾನಿ’ ಸಿನಿಮಾ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸೆಪ್ಟೆಂಬರ್ 12ರಂದು ಅವರ ನಟನೆಯ ‘ರಾನಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿಯ ದುರ್ಘಟನೆ ನಡೆದಿದೆ ಅನ್ನೋದು ಬೇಸರದ ವಿಚಾರ.

ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ. ‘ರಾನಿ’ ಸಿನಿಮಾಗೆ ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಸ್ಪತ್ರೆಯಿಂದಲೇ ಕಿರಣ್ ರಾಜ್ ಸ್ಪಷ್ಟನೆ :


ಕಿರಣ್ ರಾಜ್ ಆಕ್ಸಿಡೆಂಟ್ ಹಿನ್ನಲೆಯಲ್ಲಿ ಆಸ್ಪತ್ರೆಯಿಂದಲೇ ವಿಡಿಯೋ ಮಾಡಿದ ನಟ ಕಿರಣ್ ರಾಜ್ ನಾನು ಸದ್ಯಕ್ಕೆ ಆರಾಮವಾಗಿದ್ದೀನಿ, ಬೆಳಗ್ಗೆ ಆಕ್ಸಿಡೆಂಟ್ ಆಗಿದ್ದು ನಿಜ, ಫ್ಯಾನ್ಸ್ ಯಾರು ಗಾಬರಿ ಪಡುವ ಅಗತ್ಯವಿಲ್ಲ, ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡಿದ್ದಾರೆ.
ಸದ್ಯಕ್ಕೆ ಗಂಭೀರವಾಗಿ ಏನು ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Share with Friends
author avatar
News Desk