Latestದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ

ದಕ್ಷಿಣ ಕನ್ನಡ: ಕೇರಳದ (Kerala) ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನ (Shree Anantha Padmanabhaswamy Temple) ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದು. ಇದೀಗ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ (Belthangady) ತಾಲೂಕಿನ ಕೊಕ್ಕಡ ಗ್ರಾಮದ ಅರ್ಚಕರಾಗಿ ನೇಮಕಗೊಂಡಿದ್ದಾರೆ.

ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಎಂಬವರು ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್‌ ಬಂಧನ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

ಇವರ ಅಜ್ಜ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು. ಪಾಲಾಲೆ ದಿ. ಸತೀಶ ಯಡಪಡಿತ್ತಾಯರಲ್ಲಿ ವೇದ ಅಭ್ಯಾಸವನ್ನು ಮಾಡಿದ್ದ ಸತ್ಯನಾರಾಯಣ ತೋಡ್ತಿಲ್ಲಾಯರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೂಜಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ ಸ್ನೇಹ ಹಾಗೂ ಪುತ್ರ ಸೌರಭ್ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.ಇದನ್ನೂ ಓದಿ: ಬಿಜೆಪಿಯ ಮಾಜಿ ವಿಧಾನ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

https://youtu.be/ONvTqkOkI04?si=Ne3GoWMj1iOy_jO4

ಅಕ್ಕರ ದೇಸಿ ಸಮುದಾಯ ಸಂಘವು ಸತ್ಯನಾರಾಯಣರವರ ನೇಮಕಕ್ಕೆ ಶಿಫಾರಸು ಮಾಡಿತ್ತು. ಕೊಕ್ಕಡದ ಎಡಪಡಿತ್ತಾಯ, ಬಾಳ್ತಿಲ್ಲಾಯ, ಶಬರಾಯ, ಉಪ್ಪಾರ್ಣ, ತೋಡ್ತಿಲ್ಲಾಯ ಕುಲದ ಸದಸ್ಯರಿಗೆ ಈ ಹಿಂದಿನಿಂದಲೂ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುವ ಹಕ್ಕು ಇದೆ. ಇದನ್ನೂ ಓದಿ: ಡಿ ಗ್ಯಾಂಗ್‌ ಬಂಧನ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

Share with Friends
author avatar
News Desk