LatestWeatherಉತ್ತರ ಕನ್ನಡ-Uttara Kannadaಕೊಡಗು-Kodaguಜಿಲ್ಲಾ ಸುದ್ದಿಗಳು | District Newsದಕ್ಷಿಣ ಕನ್ನಡ-Dakshina Kannadaಬೆಳಗಾವಿ-Belagaviರಾಜ್ಯ-Karnatakaಶಿವಮೊಗ್ಗ-Shivamoggaಹಾಸನ-Hassan

ರಾಜ್ಯದ ಹಲವೆಡೆ ವರುಣನ ಅಬ್ಬರ

ಬೆಂಗಳೂರು, ಜು.7 : ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಭಾಗದಲ್ಲಿ ತೀವ್ರಗೊಂಡ ಮುಂಗಾರು ಮಳೆ


ಸದ್ಯ ಕೊಡಗು, ಬೆಳಗಾವಿ ಹಾಗೂ ಶಿವಮೊಗ್ಗ,ಉತ್ತರ ಕನ್ನಡ,ಚಿಕ್ಕಮಗಳೂರು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇನ್ನು ಜುಲೈ ಎರಡನೇ ವಾರವೂ ಮುಂಗಾರು ಅಬ್ಬರ ಮುಂದುವರೆದಿದ್ದು,ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಜುಲೈ ಎರಡನೇ ವಾರವೂ ಮುಂಗಾರು ಅಬ್ಬರ

ಅದರಲ್ಲೂ ಕೊಡಗಿನಾದ್ಯಂತ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ.
ಉಳಿದಂತೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ವ್ಯಾಪಕ ಮಳೆಮುಳುಗಿದ ಸೇತುವೆಗಳು


ಇದೇ ವೇಳೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವ್ಯಾಪಕ ಮಳೆ ಇದ್ದು,ನಿಪ್ಪಾಣಿ, ಖಾನಾಪುರ ಸೇರಿ 3 ತಾಲೂಕುಗಳಲ್ಲಿಯೂ ಶಾಲೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Share with Friends
author avatar
Digital Desk