Latestಧಾರವಾಡ-Dharwadರಾಜ್ಯ-Karnataka

ಮಗನ ತಪ್ಪಿನಿಂದಾಗಿ ಬಾಡಿಗೆ ಮನೆಯಿಂದ ಹೊರಹಾಕಿದ್ರು: ಅಂಜಲಿ ಕೊಲೆ ಆರೋಪಿ ತಾಯಿ

ಹುಬ್ಬಳ್ಳಿ: ವಿಶ್ವ ತಪ್ಪು ಮಾಡಿದ್ದಾನೆ. ಅವನಿಗೆ ಶಿಕ್ಷೆ ಆಗಲೇಬೇಕು. ಅವನಿಂದ ನಮ್ಮ ಮಾನ-ಮರ್ಯಾದೆ ಎಲ್ಲಾ ಹೋಗಿದೆ ಎಂದು ಅಂಜಲಿ ಹತ್ಯೆ (Anjali Murder Case) ಪ್ರಕರಣದ ಆರೋಪಿ ವಿಶ್ವನ ತಾಯಿ (Mother) ಶ್ವೇತ ಕಣ್ಣೀರು ಹಾಕಿದರು.

ಹುಬ್ಬಳ್ಳಿಯಲ್ಲಿ (Hubballi) ವೀರಾಪುರ ಓಣಿಯ ಅಂಜಲಿ ಅಂಬಿಗೇರ (Anjali Aambigera) ಎಂಬಾಕೆ ಹತ್ಯೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿ ವಿಶ್ವ ಅಲಿಯಾಸ್ ಗಿರೀಶ್‌ಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಇದೀಗ ಆರೋಪಿಯ ತಾಯಿ ಮಗನ ತಪ್ಪಿಗೆ ಬೇಸರಗೊಂಡು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: SSLC ಫೇಲ್ ಆಗಿರುವ ವಿದ್ಯಾರ್ಥಿಗಳ ವಿಶೇಷ ಬೋಧನೆ ತರಗತಿ ಮುಂದೂಡಿಕೆ…!

https://youtu.be/yQhaOSOME_w?si=NtCk6WioxfXaKP5D

ನನ್ನ ಮಗ ಮೊದಲು ಕೆಲಸ ಮಾಡುತ್ತಿದ್ದ. ಈ ನಡುವೆ ಕೆಲಸ ಬಿಟ್ಟ. ಆ ನಂತರ ಮನೆಯಲ್ಲಿದ್ದು, ಮದ್ಯವ್ಯಸನ ಚಟಕ್ಕೆ ಬಲಿಯಾದ. ಆ ನಂತರ 6 ತಿಂಗಳು ಮನೆ ಬಿಟ್ಟು ಹೋಗಿದ್ದ ಎಂದು ಪ್ರಕರಣ ಕುರಿತು ಆರೋಪಿ ತಾಯಿ ಶ್ವೇತಾ ಮಾತನಾಡಿ, ಮಗನ ನಡವಳಿಕೆ ಬಗ್ಗೆ ಬೇಸರಗೊಂಡಿದ್ದಾರೆ. ಇದನ್ನೂ ಓದಿ: ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿಯರಿಂದ ಮನೆಯಲ್ಲೇ ಮತದಾನ

https://youtu.be/OMuk5-xqtY8?si=eL8En7MkTztNIsRQ

ಅವನು ಆರಾಮಾಗಿ ಇದ್ದಾನೆಂದು ತಿಳಿದುಕೊಂಡಿದ್ದೆವು. ಅದರೆ ಇದೀಗ ಕೊಲೆ ಮಾಡಿರುವುದು ಗೊತ್ತಾಗಿದೆ. ಅವನು ತಪ್ಪು ಮಾಡಿದ್ದಾನೆ. ಅವನಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿ. ಅದರೆ ಮಗ ಮಾಡಿದ ತಪ್ಪಿಗೆ ನಮಗೆ ಶಿಕ್ಷೆ ನೀಡಲಾಗುತ್ತಿದೆ ಎಂದು ಬೇಸರಿಸಿದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್‌ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ

https://youtu.be/Z6BjQRIWnVA?si=cjd0t4rbi3ZL1iGY

ಅವನಿಂದಾಗಿ ಬಾಡಿಗೆ ಮನೆಯಿಂದ ಹೊರಗೆ ಹಾಕಿದ್ದಾರೆ. ನಾನು ಹೋಟೆಲಿನ ಅಡುಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇನೆ. ಅವನಿಂದ ನಮ್ಮ ಮಾನ-ಮರ್ಯಾದೆ ಎಲ್ಲಾ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ

https://youtu.be/TGcXS0i5G5k?si=X1AQNA2dFpseNi47
Share with Friends
author avatar
News Desk