ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ
ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಮಾಜಿ ಸಚಿವ ಹೆಚ್ ಡಿ. ರೇವಣ್ಣ (HD.Revanna) ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಕೆಆರ್ (KR) ನಗರದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೊದಲ (First) ಬಂಧನವಾಗಿದೆ.
ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರ (ಮೇ 03) ರಂದು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೆಚ್ಡಿ ರೇವಣ್ಣ ವಿರುದ್ಧ ಸೆಕ್ಷನ್ 364/ 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ. ಸಂತ್ರಸ್ತೆಯ ಪತ್ತೆಗೆ ವಿಶೇಷ ತನಿಖಾ ದಳ ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಸ್ಥಳದಲ್ಲಿ ಮಹಿಳೆ ಇದ್ದಾಳೆಯೇ ಅಂತ ಶೋಧ ನಡೆಸಿತ್ತು.
SIT ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಿದ್ದವು. ಇನ್ನು ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
