BlogEntertainmentLatestಕ್ರೀಡೆ-Sports

ಸಿಹಿಸುದ್ದಿ ನೀಡಿದ ಕೆ.ಎಲ್.ರಾಹುಲ್ ಹಾಗೂ ಅಥಿಯಾ ಶೆಟ್ಟಿ ದಂಪತಿ

ಶುಕ್ರವಾರದಂದು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿರುವ ಅಥಿಯಾ ಶೆಟ್ಟಿ ಈ ಶುಭ ಸುದ್ದಿಯನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅಥಿಯಾ ತಮ್ಮ ಪೋಸ್ಟ್‌ನಲ್ಲಿ, ‘ಇಷ್ಟರಲ್ಲೇ ನಮ್ಮ ಮನೆಗೆ ಪುಟ್ಟ ಅತಿಥಿಯ ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ. ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, 2025ರಲ್ಲಿ ಮನೆಗೆ ಪುಟ್ಟ ಅತಿಥಿಯ ಆಗಮನವಾಗಲಿದೆ.

ವಾಸ್ತವವಾಗಿ ರಾಹುಲ್ ಮತ್ತು ಬಾಲಿವುಡ್ ನಟಿ ಆಥಿಯಾ ಶೆಟ್ಟಿ 23 ಜನವರಿ 2023 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಪ್ರಾಸಂಗಿಕವಾಗಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರಾಹುಲ್ ಮದುವೆಯೂ ನಡೆದಿತ್ತು. ಇದೀಗ ಆಸ್ಟ್ರೇಲಿಯಾ ಸರಣಿಗೂ ಮುನ್ನ ತಮ್ಮ ಮೊದಲ ಮಗುವಿನ ಆಗಮನದ ವಿಚಾರವನ್ನು ರಾಹುಲ್ ತಮ್ಮ ಅಭಿಮಾನಿಗಳ ಬಳಿ ಹೇಳಿಕೊಂಡಿದ್ದಾರೆ.

ರಾಹುಲ್ ಸದ್ಯ ಆಸ್ಟ್ರೇಲಿಯಾದಲ್ಲಿದ್ದು, ಅಲ್ಲಿ ಆಸ್ಟ್ರೇಲಿಯಾ ಎ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದಾರೆ. ಆದರೆ ಈ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲೂ ರಾಹುಲ್ ಬ್ಯಾಟ್ ಮೌನಕ್ಕೆ ಶರಣಾಗಿದೆ. ಮೊದಲ ಇನ್ನಿಂಗ್ಸ್​ನಲ್ಲಿ 4 ರನ್​ಗಳಿಗೆ ಸುಸ್ತಾಗಿದ್ದ ರಾಹುಲ್, ಎರಡನೇ ಇನ್ನಿಂಗ್ಸ್​ನಲ್ಲಿ 10 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಆದಾಗ್ಯೂ ರಾಹುಲ್ ಆಸ್ಟ್ರೇಲಿಯಾದಲ್ಲೇ ಉಳಿದುಕೊಳ್ಳಲಿದ್ದು, ಇನ್ನು ಕೆಲವೇ ದಿನಗಳಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ರಾಹುಲ್ ಅವರನ್ನು ಟೀಂ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿದೆ. ಅಲ್ಲದೆ ನವೆಂಬರ್ 22 ರಿಂದ ಪರ್ತ್‌ನಲ್ಲಿ ಪ್ರಾರಂಭವಾಗುವ ಮೊದಲ ಟೆಸ್ಟ್‌ನಲ್ಲಿ ಅವರು ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

Share with Friends
author avatar
News Desk