Crime NewsLatestರಾಷ್ಟ್ರೀಯ-National

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮುಂಬೈ: ಖ್ಯಾತ ವಿಚಾರವಾದಿ (Rationalist) ಡಾ. ನರೇಂದ್ರ ದಾಭೋಲ್ಕರ್ (Narendra Dablahokar) ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ (pune) ವಿಶೇಷ ಯುಎಪಿಎ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ ವಿಧಿಸಿದೆ. ಇತರ ಮೂವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಾಲಯವು ಶೂಟರ್‌ಗಳಾದ ಶರದ್ ಕಲಾಸ್ಕರ್ ಮತ್ತು ಸಚಿನ್ ಅಂದುರೆ ತಪ್ಪಿತಸ್ಥರು ಎಂದು ಆದೇಶಿಸಿದೆ. ಹತ್ಯೆ ಪ್ರಕರಣದಲ್ಲಿ ಇತರ ಮೂವರು ಆರೋಪಿಗಳಾದ ವೀರೇಂದ್ರಸಿನ್ಹ ತಾವಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಎಂಬವರ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಮೂವರನ್ನು ಆರೋಪ ಮುಕ್ತಗೊಳಿಸಲಾಗಿದೆ. ಇದನ್ನೂ ಓದಿ: ಕೊನೆಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

https://youtu.be/NDNmrmJgMPo?si=ZWx5xz6XQAhADsn8

ನರೇಂದ್ರ ದಾಭೋಲ್ಕರ್ 2013 ರ ಆ.20 ರಂದು ಅವರು ಪುಣೆಯ ಓಂಕಾರೇಶ್ವರ ಸೇತುವೆಯ ಮೇಲೆ ಬೆಳಗ್ಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಐವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್

https://youtu.be/XMh0gUEtwQ4?si=R60vbd8bzgNrTia2

ತನಿಖೆ ನಡೆಸಿದ್ದ ಅಧಿಕಾರಿಗಳು, ದಾಭೋಲ್ಕರ್ ಅವರು ಮೂಢನಂಬಿಕೆ ವಿರುದ್ಧ ಅಭಿಯಾನ ನಡೆಸುತ್ತಿದ್ದ ಕಾರಣ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ಬಳಿಕ 2014ರಲ್ಲಿ, ಬಾಂಬೆ ಹೈಕೋರ್ಟ್ ನಿರ್ದೇಶನದ ನಂತರ ಸಿಬಿಐ ತನಿಖೆಯನ್ನು ವಹಿಸಿಕೊಂಡಿತ್ತು. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್; ಕಾರ್ತಿಕ್, ದೇವರಾಜೇಗೌಡಗೆ SIT ನೋಟಿಸ್

https://youtu.be/AddYyJKhTeg?si=y6m_zP-AtAy9ayhn
Share with Friends
author avatar
News Desk