Crime NewsLatestರಾಷ್ಟ್ರೀಯ-National

ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಹೊಸ ಮದ್ಯ ನೀತಿಯಲ್ಲಿ ಅಕ್ರಮ ಹನ ವರ್ಗಾವಣೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಬಂಧನಕೊಳ್ಳಪಟ್ಟಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏ.26 ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ.

ವಕೀಲ ಮೋಹಿತ್ ಮಾಥುರ್ ಅವರು ಸಿಸೋಡಿಯಾ ಪರ ವಾದ ಮಂಡಿಸಿದ ಪ್ರಕರಣ ತನಿಖೆಯನ್ನು ಪುರ್ಣಗೊಳಿಸಲು ವಿಳಂಬವಾಗಿದೆ. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೂಯ್ ಬಾಬುಗೆ ಜಾಮೀನು ನೀಡಿರುವುದು ಉಲ್ಲೇಖಿಸಿ ಸಿಸೋಡಿಯಾ ಕೂಡ ಪ್ರಭಾವಿ ಸ್ಥಾನದಲ್ಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಮಲಕ್ಕೆ ಅಣಕು ಮತದಾನದಲ್ಲಿ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

https://youtu.be/GpS2c14GVR0?si=8eDt-XptS-is4BGc

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪರ‍್ಣ ತನಿಖೆವರೆಗೂ ಜಾಮೀನು ನೀಡಬಾರದು ಎಂದು ವಾದಿಸಿದರು. ವಾದ ಪ್ರತಿವಾದ ಆಲಿಸಿದ ಕರ‍್ಟ್ ಏಪ್ರಿಲ್ 26 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತು. ಇದನ್ನೂ ಓದಿ:  ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ಥಳಿಸಿ, ಬಾಯಿಗೆ ಫೆವಿಕ್ವಿಕ್ ಹಾಕಿ ಚಿತ್ರಹಿಂಸೆ ನೀಡಿದ ಯುವಕ

https://youtu.be/n6TR5sFjO68?si=9lWMEtgbqANyg0CY
Share with Friends
author avatar
News Desk