Latestಚುನಾವಣೆ-Electionಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಲೋಕಸಭಾ ಚುನಾವಣಾ ಫಲಿತಾಂಶ – ಅತ್ಯಚಾರಿ ಆರೋಪಿ ಪ್ರಜ್ವಲ್‌ಗೆ ಫಲಿತಾಂಶ ನೋಡುವ ಭಾಗ್ಯ

ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನದ ಬಿಅಜೆಪಿ-ಜೆಡಿಎಸ್ ಮೈತ್ರಿ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡುವ ಅವಕಾಶ ಸಿಕ್ಕಿದೆ.

ರಿಸಲ್ಟ್ ನೋಡುವ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರು ವಿಶೇಷ ತನಿಖಾ ತಂಡ (SIT) ಕಚೇರಿಯಲ್ಲಿ ಫಲಿತಾಂಶ ನೋಡುತ್ತಿದ್ದಾರೆ.‌ ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ- NDA vs INDIA ಭಾರೀ ಪೈಪೋಟಿ

https://youtu.be/F0T9C-4BUvE?si=c5Q0i2B83HmJ0h0z

ಪೆನ್‌ಡ್ರೈವ್ ವಿಚಾರ ಹೊರಬರುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಎಸ್‌ಐಟಿ ನೋಟಿಸ್ ಜಾರಿ ಮಾಡಿದ್ದರೂ ಕ್ಯಾರೇ ಎಂದಿರಲಿಲ್ಲ. ಬಳಿಕ ಬರೋಬ್ಬರಿ 34 ದಿನಗಳ ಬಳಿಕ ಭಾರತಕ್ಕೆ ವಾಪಸ್ಸಾಗಿದ್ದರು. ಜರ್ಮನಿಯ ಮ್ಯೂನಿಕ್‌ನಿಂದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ಲಾಕ್ ಮಾಡಿದ್ದರು. ಇದನ್ನೂ ಓದಿ: ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಲೆ- ಬಿ.ವೈ ರಾಘವೇಂದ್ರ ಟೆಂಪಲ್ ರನ್

https://youtu.be/R86Ec-skwp8?si=WqA95CBhqkbxjFX2

ಇದಾದ ಬಳಿಕ ಮೆಡಿಕಲ್ ಟೆಸ್ಟ್ಗೆ ಒಳಪಡಿಸಿ ನಂತರ ಅವರನ್ನು ಎಸ್‌ಐಟಿಯವರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಅವರು ಲೋಕಸಭಾ ಚುನಾವಣೆಯ ಫಲಿತಾಂಶ ನೋಡಲು ಅವಕಾಶ ನೀಡಬೇಕು ಎಂದು ಜಡ್ಜ್ ಮುಂದೆ ಮನವಿ ಮಾಡಿಕೊಂಡಿದ್ದರು. ಆಗ ಕೋರ್ಟ್, ಪರಿಸ್ಥಿತಿ ನೋಡಿಕೊಂಡು ವ್ಯವಸ್ಥೆ ಮಾಡಿಕೊಳ್ಳಲಾಗುವುದಾಗಿ ತಿಳಿಸಿತ್ತು. ಅಂತೆಯೇ ಇದೀಗ ಎಸ್‌ಐಟಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಫಲಿತಾಂಶ ವೀಕ್ಷಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿ ಮದ್ಯ ಹಗರಣ: ಸಾಕ್ಷ್ಯಗಳಿದ್ದ 9 ಫೋನ್‌ ನಾಶ, 10 ಲಕ್ಷ ರೂ. ಮೌಲ್ಯದ ರೂಮ್ ಬುಕ್‌

https://youtu.be/Y-V7TpmnYiE?si=aCLxeW6o3oxRKeLE
Share with Friends
author avatar
News Desk