Latestಚುನಾವಣೆ-Electionರಾಷ್ಟ್ರೀಯ-National

ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್

ನವದೆಹಲಿ: ಇಂದು ಲೋಕಸಭೆ ಚುನಾವಣೆ 2024ರ (Loka Sabha Election) ಐದನೇ ಹಂತದಲ್ಲಿ ಮತದಾನ (Voting) ನಡೆಯುತ್ತಿದೆ. ಒಟ್ಟು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ. ಇದನ್ನೂ ಓದಿ: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

https://youtu.be/NEfC4jep7Zg?si=XXdeifxYcRfV5ugB

ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

https://youtu.be/MyT8YPuUm_g?si=2XKW2iyFRkz5_OPm
Share with Friends
author avatar
News Desk