BlogLatestರಾಷ್ಟ್ರೀಯ-National

ಪತ್ನಿಯ ರುಂಡವನ್ನು ಕೈಯಲ್ಲಿ ಹಿಡಿದು ಊರುತುಂಬಾ ಓಡಾಡಿದ್ದ ವ್ಯಕ್ತಿಯ ಬಂಧನ

ಮಾಧೇಪುರ (ಬಿಹಾರ) : ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿದ್ದಾನೆ.

ಆಕೆಯ ರುಂಡವನ್ನು ಕೈಯಲ್ಲಿ ಹಿಡಿದು ಸುತ್ತಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ, ವ್ಯಕ್ತಿಯೊಬ್ಬ ತನ್ನ ಪತ್ನಿ ಪೂಜಾದೇವಿಯನ್ನು ಹರಿತವಾದ ಚಾಕುವಿನಿಂದ ಕತ್ತು ಸೀಳಿ ಕೊಲೆಗೈದಿದ್ದಾನೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಘಟನೆಯ ಪ್ರಮುಖ ಆರೋಪಿ ಅರ್ಜುನ್ ಶರ್ಮಾನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆರೋಪಿ ಅರ್ಜುನ್ ಕೈಯಲ್ಲಿ ಬ್ಯಾಗ್ ಹಿಡಿದು ಪೊಲೀಸ್ ಠಾಣೆಗೆ ಬರುತ್ತಿದ್ದ ಎಂದು ನಜೀರ್ ತಿಳಿಸಿದ್ದಾನೆ. ಚೀಲದಿಂದ ರಕ್ತ ಸೋರುತ್ತಿತ್ತು. ಅಷ್ಟರಲ್ಲಿ ಒಬ್ಬ ಪೋಲೀಸ್ ಅವನನ್ನು ತಡೆದಿದ್ದರು, ಆಗ ಬ್ಯಾಗ್ ನಲ್ಲಿ ತುಂಡರಿಸಿದ ತಲೆಯನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದರು. ಇದಾದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪತ್ನಿಯನ್ನು ಏಕೆ ಕೊಂದಿದ್ದೀರಿ ಎಂದು ಪ್ರಶ್ನಿಸಿದಾಗ ಆಕೆಗೆ ಬೇರೊಬ್ಬ ವ್ಯಕ್ತಿಯ ಜತೆ ಅಕ್ರಮ ಸಂಬಂಧವಿತ್ತು ಎಂದು ಹೇಳಿದ್ದಾನೆ.

Share with Friends
author avatar
News Desk