Crime NewsLatestಕಲಬುರಗಿ-Kalaburagiಜಿಲ್ಲಾ ಸುದ್ದಿಗಳು | District News

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿ,ಜು.12 : ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಬಳಿ ನಡೆದಿದೆ.
ಚಿಣಮಗೇರ ಗ್ರಾಮದ ಬಡೇಸಾಬ್ (42) ಹತ್ಯೆಯಾದ ವ್ಯಕ್ತಿಯಾಗಿದ್ದು,ಈತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಇನ್ನು ಒಕ್ಕಲುತನ ಮಾಡಿಕೊಂಡಿದ್ದ ಬಡೇಸಾಬ್ ಮೃತ ದೇಹ ಚೌಡಾಪುರ ಗ್ರಾಮದ ಮುಖ್ಯರಸ್ತೆಯ ಜಮೀನಿನಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಗಾಣಗಾಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share with Friends
author avatar
Digital Desk