BlogCrime Newsರಾಷ್ಟ್ರೀಯ-National

ಮೋದಿ, ಯೋಗಿ ಹೊಗಳಿದ್ದಕ್ಕೆ ಹೆಂಡತಿಗೆ ಬೆಂಕಿಹಚ್ಚಿ ತಲಾಖ್ ನೀಡಿದ ಗಂಡ

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರಿಗೆ ಆಕೆಯ ಪತಿ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಲ್ಲದೆ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ. ದೆಹಲಿ ದರ್ವಾಜಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಬಹ್ರೈಚ್ ಮೂಲದ ಮಹಿಳೆ ಅಯೋಧ್ಯೆಯ ಅರ್ಷದ್ ಎಂಬಾತನನ್ನು ಮದುವೆಯಾಗಿದ್ದಳು. ಅವರ ಮದುವೆಯ ನಂತರ, ಆ ಮಹಿಳೆ ಅಯೋಧ್ಯೆಗೆ ಆಗಮಿಸಿದಾಗ ಆಕೆ ಉತ್ತರ ಪ್ರದೇಶದ ಪರಿಸರದಿಂದ ಪ್ರಭಾವಿತರಾದರು. ಆಕೆ ಆಗಾಗ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳುತ್ತಿದ್ದರು. ಇದರಿಂದ ಕೋಪಗೊಂಡ ಪತಿ ಆಕೆಗೆ ಬೆಂಕಿಹಚ್ಚಿ, ವಿಚ್ಛೇದನವನ್ನೂ ನೀಡಿದ್ದಾನೆ.

ಸಂತ್ರಸ್ತೆ ಈಗ ಅಯೋಧ್ಯೆ ಮತ್ತು ಬಹ್ರೈಚ್ ಜಿಲ್ಲೆಗಳ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತಿದ್ದರೂ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಅರ್ಷದ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪವೂ ಇದೆ.

Share with Friends
author avatar
News Desk