BlogLatestರಾಷ್ಟ್ರೀಯ-National

ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ದೆಹಲಿ..!

ದೆಹಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ನೆಬ್ ಸರಾಯ್​ನಲ್ಲಿ ವ್ಯಕ್ತಿ ಆತನ ಪತ್ನಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೃತರನ್ನು ರಾಜೇಶ್ (53), ಅವರ ಪತ್ನಿ ಕೋಮಲ್ (47) ಮತ್ತು ಅವರ 23 ವರ್ಷದ ಮಗಳು ಕವಿತಾ ಎಂದು ಗುರುತಿಸಲಾಗಿದೆ. ಆದರೆ ಮಗ ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ಕಾರಣ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಮಗ ಬೆಳಗ್ಗೆ 5 ಗಂಟೆ ಸುಮಾರಿಗೆ ಜಾಗಿಂಗ್​ಗೆಂದು ಹೊರಗೆ ಹೋಗಿದ್ದ ಮನೆಗೆ ಹಿಂದಿರುಗಿದಾಗ ಹೆತ್ತವರು ಹಾಗೂ ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣವೇ ಪೊಲೀಸರು ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಮನೆಯಲ್ಲಿ ಯಾವ ವಸ್ತುವು ಕಳವಾಗಿಲ್ಲ ಎಂಬುದು ತಿಳಿದುಬಂದಿದೆ. ಇಂದು ತಂದೆ-ತಾಯಿಯ ಮದುವೆ ವಾರ್ಷಿಕೋತ್ಸವವಿತ್ತು ಎಲ್ಲರೂ ಸಂತೋಷದಿಂದಿದ್ದರು ಎಂದು ಮಗ ಹೇಳಿದ್ದಾನೆ. ನಿವಾಸಿಗಳಿಗೆ ಭದ್ರತೆ ಒದಗಿಸುವ ತನ್ನ ಜವಾಬ್ದಾರಿಯನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅತಿಶಿ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Share with Friends
author avatar
News Desk