LatestTop Storiesಮಂಡ್ಯ-Mandyaರಾಜ್ಯ-Karnataka

ಮಂಡ್ಯ: 100 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ

ಮಂಡ್ಯ: ಕಾವೇರಿ (Kaveri) ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್ (KRS) ಡ್ಯಾಂ 100 ಅಡಿ ಭರ್ತಿಯಾಗಿದೆ.

ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಚುರುಕು ಪಡೆದಿದ್ದು, ಇದರಿಂದ ಕೆಆರ್‌ಎಸ್ ಡ್ಯಾಂಗೆ (KRS Dam) ಎರಡು ವಾರದಿಂದ ಪ್ರತಿದಿನ ಸರಾಸರಿ 10 ಸಾವಿರ ಕ್ಯೂಸೆಕ್‌ ಒಳಹರಿವು ಬರುತ್ತಿದೆ. ಇದರ ಬೆನ್ನಲ್ಲೇ ಇದೀಗ 100 ಅಡಿಗೆ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ -ದರ್ಶನ್‍ಗೆ 40 ಲಕ್ಷ ಕೊಟ್ಟ ಮೂವರಿಗೆ ನೋಟಿಸ್

https://youtu.be/cNICt2Bl8yw?si=gGWD_7Gwz-_OAUTO

ಕೆಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಇದೇ ತಿಂಗಳ 8 ರಿಂದ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುವುದಾಗಿಯು ಸಹ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರವಾಗಿ ಕೆಆರ್‌ಎಸ್ ಭರ್ತಿಯಾಗಲಿದೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ ದುರಂತ – ಸಂತ್ರಸ್ತರ ಕುಟುಂಬಸ್ಥರ ಭೇಟಿ ಮಾಡಿದ ರಾಹುಲ್‌ ಗಾಂಧಿ

https://youtu.be/XF0Va8FGxMI?si=9lB9GVkimaB6ssCw
Share with Friends
author avatar
News Desk