LatestTop Storiesಬೆಳಗಾವಿ-Belagavi

ಯರಗಟ್ಟಿ ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ವಿವಿಧ ಬರಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಬೆಳೆ ಹಾನಿಯ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.ಯಳಜರ್ವಿ ಹಾಗೂ ಕುರಬಗಟ್ಟಿ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಒಣಗಿ ಹೋಗುತ್ತಿರುವ ಬೆಳೆಗಳನ್ನು ವೀಕ್ಷಿಸಿದರು.

ಕಳೆದ ಎರಡು ತಿಂಗಳಿಂದ ಸೂಕ್ತ ಮಳೆಯಾಗದ ಹಿನ್ನೆಲೆಯಲ್ಲಿ ಶೇಂಗಾ, ಉದ್ದು, ಮೆಕ್ಕೆಜೋಳ ಹಾಗೂ ಹೆಸರು ಬೆಳೆಗಳು ತೀವ್ರವಾಗಿ ಹಾನಿಗೊಳಗಾಗಿವೆ ಎಂದು ರೈತರು ಸಚಿವರ ಮುಂದೆ ತಮ್ಮ ಅಳಲು ತೋಡಿಕೊಂಡರು.ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಯರಗಟ್ಟಿ ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ

ವರು ಯರಗಟ್ಟಿ, ರಾಮದುರ್ಗ ಹಾಗೂ ಸವದತ್ತಿ ತಾಲ್ಲೂಕುಗಳ ಬರ ಪರಿಸ್ಥಿತಿಯ ಕುರಿತು ಸಚಿವರಿಗೆ ಮಾಹಿತಿ ನೀಡಿದರು.ಈ ಮೂರು ತಾಲ್ಲೂಕುಗಳಲ್ಲಿ ಶೇಕಡ 40ರಷ್ಟು ಮಳೆ ಕೊರತೆಯಾಗಿದ್ದು, ಕಳೆದ ಎರಡು ವಾರಗಳಿಂದ ಮಳೆ ಸಂಪೂರ್ಣ ಕೈಕೊಟ್ಟಿದೆ. ಮುಂದಿನ ಒಂದು ವಾರದೊಳಗೆ ಮಳೆಯಾಗದಿದ್ದರೆ ಬೆಳೆ ಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಕುರಿತು ತಕ್ಷಣವೇ ಸಮಗ್ರ ವರದಿ ಸಿದ್ಧಪಡಿಸಿ, ಸರ್ಕಾರಕ್ಕೆ ಶೀಘ್ರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

Share with Friends
author avatar
Digital Desk