LatestTop Storiesಬೆಳಗಾವಿ-Belagavi

ಬುಡಾ ನೂತನ ಅಧ್ಯಕ್ಷರಾಗಿ ಶಾಸಕ ಆಸಿಫ್ ಸೇಠ್ ನೇಮಕ!

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಅಂದರೆ ಬುಡಾ (BUDA)ದ ನೂತನ ಅಧ್ಯಕ್ಷರಾಗಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್ ರಾಜು ಸೇಠ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಅನ್ವಯ, ಈ ಹಿಂದೆ ಬುಡಾ ಅಧ್ಯಕ್ಷರಾಗಿದ್ದ ಲಕ್ಷ್ಮಣರಾವ್ ಚಿಂಗಳೆ ಅವರ ಸ್ಥಾನಕ್ಕೆ ಆಸಿಫ್ ಸೇಠ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.ಇಂದು ಬುಡಾ ಅಧ್ಯಕ್ಷರಾಗಿ ಶಾಸಕ ಆಸಿಫ್ ಸೇಠ್ ಅವರು ಪದಗ್ರಹಣ ಮಾಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಶಾಸಕ ಫಿರೋಜ್ ಸೇಠ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಶಾಸಕ ಆಸಿಫ್ ಸೇಠ್ ಅವರಿಗೆ ಇದೀಗ ಬೆಳಗಾವಿ ನಗರದ ಅಭಿವೃದ್ಧಿ, ನಗರ ಯೋಜನೆ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ.

Share with Friends
author avatar
Digital Desk